ನವದೆಹಲಿ: ದಿವಂಗತ ಅಪ್ಪು ಜನ್ಮದಿನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭಕೋರಿದ್ದಾರೆ.
ಈ ಫೇಸ್‌ಬುಕ್ ಖಾತೆ ಮೂಲಕ ಶುಭ ಕೋರಿದ ಅವರು, ಅಪ್ಪು ಫೋಟೋದ ಜೊತೆಗೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಜನ್ಮದಿನದಂದು ಅವರಿಗೆ ವಿನಮ್ರ ನಮನಗಳು. ಒಬ್ಬ ಅದ್ಭುತ ಕಲಾವಿದ, ಸಿನಿಮಾದಲ್ಲಿನ ಅವರ ಕೆಲಸ ಮತ್ತು ಜನರ ಕಲ್ಯಾಣಕ್ಕಾಗಿ ಅವರು ನೀಡಿರುವ ಕೊಡುಗೆ ಇಂದಿಗೂ ಅನೇಕರಿಗೆ ಸ್ಫೂರ್ತಿ ಎಂದು ಬರೆದುಕೊಂಡಿದ್ದಾರೆ.
ರಾಹುಲ್ ಗಾಂಧಿ, ಪುನೀತ್ ರಾಜ್ ಕುಮಾರ್ ನಿಧನರಾದ ಸಂದರ್ಭದಲ್ಲಿಯೂ ಟ್ವೀಟ್ ಮಾಡಿದ್ದರು. ಕನ್ನಡ ನಟ ಪುನೀತ್ ರಾಜ್‌ಕುಮಾರ್ ಅವರ ಕುಟುಂಬ, ಅಭಿಮಾನಿಗಳು ಹಾಗೂ ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದಿದ್ದರು. ಪುನೀತ್ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹಳಷ್ಟು ಜನ ಸಾಮಾಜಿಕ ಜಾಲತಾಣದಲ್ಲಿ ಶುಭಕೋರಿದ್ದಾರೆ.


















