ದಕ್ಷಿಣ ಕೊರಿಯಾದ ಗಾಯಕಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೊರಿಯನ್ ಗಾಯಕಿ ಪಾರ್ಕ್ ಬೋ ರಾಮ್ ತಮ್ಮ 30ನೇ ವಯಸ್ಸಿಗೆ ಸಾವನ್ನಪ್ಪಿದ್ದಾರೆ. ಏ.11ರಂದು ಗಾಯಕಿ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಗಾಯಕಿ ಸಾವಿನ ಕುರಿತು ಏಜೆನ್ಸಿ ಕ್ಸಾನಾಡು ಎಂಟರ್‌ಟೈನ್‌ಮೆಂಟ್ ಅಧಿಕೃತವಾಗಿ ಮಾಹಿತಿ ನೀಡಿದೆ.
ಹಠಾತ್ ನಿಧನ ಅವರ ಅಭಿಮಾನಿಗಳು ಹಾಗೂ ಆಪ್ತರಿಗೆ ಶಾಕ್ ನೀಡಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ವರ್ಷದ ಕೊನೆಯಲ್ಲಿ 2 ಹಾಡುಗಳನ್ನು ಬ್ಯಾಕ್ ಟು ಬ್ಯಾಕ್ ಬಿಡುಗಡೆ ಮಾಡುವ ಕುರಿತು ಗಾಯಕಿ ಮಾಹಿತಿ ನೀಡಿದ್ದರು. ಅವರು ತಮ್ಮ 17ನೇ ವಯಸ್ಸಿನಿಂದ ಸಂಗೀತ ಕ್ಷೇತ್ರಕ್ಕೆ ಕಾಲಿಟ್ಟಿದ್ದರು.