ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 2023ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪುರುಷರೇ ಹೆಚ್ಚಾಗಿ ಸಾವನ್ನಪ್ಪಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಬಹುತೇಕರು ವಿದ್ಯಾರ್ಥಿಗಳು ಹಾಗೂ ಕೆಲಸ ಮಾಡುವ ವಯಸ್ಸಿನವರಾಗಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ಹೆಲ್ಮೆಟ್ ಧರಿಸದಿರುವುದು ಮತ್ತು ಅತಿವೇಗದ ಚಾಲನೆಯೇ ಅಪಘಾತಕ್ಕೆ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
2023 ರಲ್ಲಿ ಬೆಂಗಳೂರು ನಗರದಲ್ಲಿ ಒಟ್ಟು 883 ಮಾರಣಾಂತಿಕ ಅಪಘಾತಗಳು ಸಂಭವಿಸಿದ್ದು, 913 ಜನರು ಸಾವನ್ನಪ್ಪಿದ್ದಾರೆ. 2022ಕ್ಕಿಂತ 2023ರಲ್ಲಿ ಅಪಘಾತ ಶೇ17 ರಿಂದ 18 ರಷ್ಟು ಹೆಚ್ಚಾಗಿದೆ. 2022ರಲ್ಲಿ 770 ಪುರುಷರು ಸಾವನ್ನಪ್ಪಿದ್ದಾರೆ. ಈ ಪೈಕಿ 393 ಜನ 21-40 ನಡುವಿನ ವಯಸ್ಸಿನ ಪುರುಷರು. 2022 ರಲ್ಲಿ ಒಟ್ಟು 123 ಪುರುಷರು ಮೃತಪಟ್ಟಿದ್ದರು.