ಹಾಸನ: ಪೋಷಕರು ಮದುವೆಗೆ ವಿರೋಧಿಸಿದ್ದಾರೆ ಎಂಬ ಕಾರಣಕ್ಕೆ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹೊಳೆನರಸೀಪುರದಲ್ಲಿ ಈ ಘಟನೆ ನಡೆದಿದೆ. ನಗರನಹಳ್ಳಿ ಗ್ರಾಮದ ರಾಜು (24) ಸಾವನ್ನಪ್ಪಿದ ದುರ್ದೈವಿ. ಅಪ್ರಾಪ್ತ ಬಾಲಕಿ ಜೀವನ್ಮರಣದ ನಡುವೆ ಹೋರಾಟ ಮಾಡುತ್ತಿದ್ದಾರೆ. ಈತ ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ. ಮನೆಯಲ್ಲಿ ಅಪ್ರಾಪ್ತೆ ಎನ್ನುವ ಕಾರಣಕ್ಕೆ ಮದುವೆಗೆ ನಿರಾಕರಿಸಿದ್ದಾರೆ. ಅಲ್ಲದೇ, ಪೋಷಕರು ಬುದ್ಧಿವಾದ ಹೇಳಿದ್ದರು.
ಇದರಿಂದ ನೊಂದ ಪ್ರೇಮಿಗಳುವಿಷ ಸೇವಿಸಿ, ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿ ಸೇತುವೆ ಮೇಲಿನ ರೈಲ್ವೇ ಹಳಿ ಮೇಲೆ ಮಲಗಿದ್ದಾರೆ. ಹಳಿ ಮೇಲೆ ಒದ್ದಾಡುತ್ತಿದ್ದ ಇಬ್ಬರನ್ನು ನೋಡಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಕೂಡಲೇ ಬಂದ ಪೊಲೀಸರು ಚಿಕಿತ್ಸೆಗೆ ದಾಖಲಿಸಿದ್ದರು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದು, ಯುವತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು
ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.