ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ನೀಡಿರುವ ಜಾರಿ ನಿರ್ದೇಶನಾಲಯದ ಸಮನ್ಸ್‌ಗೆ ತಡೆ ನೀಡಲು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯದ ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಾಕೇಶ್ ಸೈಲ್ ಅವರು ಪ್ರಕರಣದಲ್ಲಿ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ವಿನಾಯಿತಿಗಾಗಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ನು ಸಂಪರ್ಕಿಸುವಂತೆ ಕೇಜ್ರಿವಾಲ್ ಗೆ ಸೂಚಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿ ತಿಳಿಸಿದೆ.
ಮಾರ್ಚ್ 16 ರಂದು ತನ್ನ ಮುಂದೆ ಹಾಜರಾಗುವಂತೆ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ನೀಡಿದ ಆದೇಶದ ವಿರುದ್ಧ ಕೇಜ್ರಿವಾಲ್ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಈಗಾಗಲೇ ಕೇಜ್ರಿವಾಲ್ ಹಲವಾರು ಸಮನ್ಸ್ ಗಳಿಗೆ ಗೈರಾಗಿದ್ದಕ್ಕೆ ಇಡಿ ಮ್ಯಾಜಿಸ್ಟ್ರೀಯಲ್ ನ್ಯಾಯಾಲಯಕ್ಕೆ ಎರಡು ದೂರುಗಳನ್ನು ಸಲ್ಲಿಸಿದೆ. ಸಿಎಂ ಇಲ್ಲಿಯವರೆಗೆ 8 ಸಮನ್ಸ್ ಗಳಿಗೆ ಗೈರಾಗಿದ್ದಾರೆ. ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರವು 2021-22ರಲ್ಲಿ ಅಬಕಾರಿ ನೀತಿ ತಂದಿದ್ದು, ಮಾರಾಟ-ಪರಿಮಾಣ ಆಧಾರಿತ ವ್ಯವಸ್ಥೆಯನ್ನು ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದೊಂದಿಗೆ ಬದಲಿಸುವ ಮೂಲಕ ನಗರದ ಪ್ರಮುಖ ಮದ್ಯದ ವ್ಯಾಪಾರ ಪುನರುಜ್ಜೀವನಗೊಳಿಸುವ ಗುರಿ ಹೊಂದಿದೆ. ಎಎಪಿ ಅಬಕಾರಿ ನೀತಿಯನ್ನು ಅಂತಿಮಗೊಳಿಸಲು 100 ರೂ. ಕೋಟಿಗಳಷ್ಟು ಕಿಕ್ ಬ್ಯಾಕ್ ಗಳನ್ನು ಪಡೆದುಕೊಂಡಿದೆ. ಈ ಹಣದ ದೊಡ್ಡ ಭಾಗವನ್ನು ಪಕ್ಷವು ತನ್ನ ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಫೆಬ್ರವರಿ 26 ರಂದು ಮತ್ತು ಅಕ್ಟೋಬರ್ 5 ರಂದು ಸಂಜಯ್ ಸಿಂಗ್ ರನ್ನು ಬಂಧಿಸಿದೆ.