ಚಾಮರಾಜನಗರ: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ಅಮಿತ್ ಶಾ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹನೂರು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಅಮಿತ್ ಶಾ ಓರ್ವ ಗೂಂಡಾ, ರೌಡಿ ಎಂದು ಹೇಳಿದ್ದಾರೆ. ಅವರು, ಗುಜರಾತ್‍ನಲ್ಲಿ ನರಮೇಧ ಮಾಡಿದವರು. ಇಂತಹ ವ್ಯಕ್ತಿಗಳು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕ್ರಿಮಿನಲ್ ಚಟುವಟಿಕೆಯುಳ್ಳ ಇಂತಹವರನ್ನು ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಆಡಳಿತ ನಡೆಸುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.
2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು, ಅದು ಆಗಲಿಲ್ಲ. ಈಗ ನಿರೋದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ ಮಾಡೋದು ಕೇಂದ್ರ ಸರ್ಕಾರದ ಹೊಣೆ ಅಲ್ಲ ಎಂದು ಹೇಳ್ತಿದ್ದಾರೆ. ಕಪ್ಪು ಹಣ ವಾಪಸ್ ತರುತ್ತೇವೆ ಎಂದಿದ್ದರು, ಆದರೆ, ಇವರಿಗೆ ತರಲು ಆಗಲಿಲ್ಲ. ಬರೀ ಸುಳ್ಳು ಹೇಳಿ ಜನರನ್ನು ಯಾಮಾರಿಸುವುದೇ ಇವರ ಕೆಲಸ ಎಂದು ಯತೀಂದ್ರ ತೀವೃ ವಾಗ್ದಾಳಿ ನಡೆಸಿದ್ದಾರೆ.