ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್ ಸಿಬಿ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಅಬ್ಬರಿಸಿದ್ದು, 74 ರನ್ ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದ್ದಾರೆ.
ಅಲ್ಲದೇ, ಈ ಅರ್ಧಶತಕದ ಮೂಲದ ದಾಖಲೆಯನ್ನು ಕೂಡ ಬರೆದಿದ್ದಾರೆ. ಈ ಅರ್ಧ ಶತಕದೊಂದಿಗೆ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ 100ನೇ ಬಾರಿ 50ಕ್ಕೂ ಅಧಿಕ ರನ್ ಬಾರಿಸಿದ ದಾಖಲೆ ಬರೆದಿದ್ದಾರೆ.
ಈ ಸಾಧನೆಯ ಮೂಲಕ ಟಿ20 ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ದಾಖಲೆಯನ್ನು ಕೂಡ ಕೊಹ್ಲಿ ಬರೆದಿದ್ದಾರೆ. 100ನೇ ಬಾರಿಗೆ 50+ ಇನ್ನಿಂಗ್ಸ್‌ಗಳನ್ನು ಆಡಿದ ವಿಶ್ವದ ಮೂರನೇ ಬ್ಯಾಟ್ಸ್‌ಮನ್ ಕೂಡ ಆಗಿದ್ದಾರೆ. ಕ್ರಿಸ್ ಗೇಲ್ ಹಾಗೂ ಡೇವಿಡ್ ವಾರ್ನರ್, ಕೊಹ್ಲಿಗಿಂತ ಮುಂಚೆ ಈ ಸಾಧನೆ ಮಾಡಿದ್ದಾರೆ.
ಪಂಜಾಬ್ ಕಿಂಗ್ಸ್ ವಿರುದ್ಧ 7 ಬೌಂಡರಿ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಡೇವಿಡ್ ವಾರ್ನರ್ ರನ್ನು ಹಿಂದಿಕ್ಕಿದ್ದಾರೆ. ಡೇವಿಡ್ ವಾರ್ನರ್ ಇದುವರೆಗೆ 649 ಬೌಂಡರಿಗಳನ್ನು ಬಾರಿಸಿದ್ದು, ವಿರಾಟ್ ಕೊಹ್ಲಿ 650ಕ್ಕೂ ಅಧಿಕ ಬೌಂಡರಿ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ 759 ಬೌಂಡರಿ ಬಾರಿಸಿರುವ ಶಿಖರ್ ಧವನ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.