ದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಬಿಆರ್ ಎಸ್ ನ ವಿಧಾನಸಪರಿಷತ್ ಸದಸ್ಯೆ ಹಾಗೂ ಕೆಸಿಆರ್ ಪುತ್ರಿ ಕೆ. ಕವಿತಾರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಬಂಧಿಸಿ ಇಡಿ ದೆಹಲಿಗೆ ಕರೆತರುತ್ತಿದೆ. ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನಲ್ಲಿರುವ ಕವಿತಾ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಗೈರು ಹಾಜರಾದ ನಂತರ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.
ಭಾರತ್ ರಾಷ್ಟ್ರ ಸಮಿತಿ ಮುಖ್ಯಸ್ಥ ಮತ್ತು ಮಾಜಿ ಸಿಎಂ ಕೆ. ಚಂದ್ರಶೇಖರ ರಾವ್ ಪುತ್ರಿಯಾಗಿದ್ದಾರೆ. ಕವಿತಾ ಅವರನ್ನು ಈ ಹಿಂದೆ ವಿಚಾರಣೆಗೊಳಪಡಿಸಿದ್ದರೂ, ಈ ವರ್ಷ ಎರಡು ಸಮನ್ಸ್‌ಗಳಿಗೆ ಹಾಜರಾಗಿರಲಿಲ್ಲ.


















