ಫ್ಲೋರಿಡಾ ಗವರ್ನರ್ ರಾನ್ ಡಿಸಾಂಟಿಸ್ 14 ವರ್ಷದೊಳಗಿನ ಅಪ್ರಾಪ್ತರಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಹೀಗಾಗಿ ಈ ದೇಶದಲ್ಲಿ 14 ವರ್ಷಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸದಂತೆ ಹೊಸ ಕಾನೂನು ಜಾರಿಗೊಳಿಸಲಾಗಿದೆ. 14 ಮತ್ತು 15 ವರ್ಷ ವಯಸ್ಸಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಸಲು ಪೋಷಕರ ಒಪ್ಪಿಗೆ ಪಡೆಯಬೇಕು. ಸಾಮಾಜಿಕ ಜಾಲತಾಣಗಳ ಬಳಕೆ ಅಪ್ರಾಪ್ತ ವಯಸ್ಸಿನವರ ಮಾನಸಿಕ ಆರೋಗ್ಯದ ಮೇಲೆ ನೇರ ಪ್ರಭಾವ ಬೀರುತ್ತದೆ ಎಂಬ ಕಾರಣದಿಂದಾಗಿ ಈ ಕಾನೂನು ಜಾರಿಗೊಳಿಸಲಾಗಿದೆ ಎಂದು ಡಿಸಾಂಟಿಸ್ ಹೇಳಿದ್ದಾರೆ.
ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ 14 ವರ್ಷದೊಳಗಿನ ಎಲ್ಲಾ ಮಕ್ಕಳ ಖಾತೆಗಳನ್ನು ಡಿಲೀಟ್ ಮಾಡುವಂತೆ ಕೂಡ ಸೂಚಿಸಲಾಗಿದೆ. ಹಾಗೆಯೇ ನಮ್ಮ ದೇಶದಲ್ಲೂ ಇಂಥ ಉಪಯುಕ್ತ ಕಾನೂನು ಜಾರಿಗೆ ಬರುವಂತಾದರೆ ಒಳಿತಾಗುತ್ತಿತ್ತು .