ಮೈಸೂರು: ಕಾವೇರಿ ನದಿಗೆ ಈಜಲು ತೆರಳಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.
ಮೈಸೂರು ಮೂಲದ ನಾಗೇಶ್(40), ಭರತ್(17), ಗುರು(32), ಮಹದೇವ್(16) ಸಾವನ್ನಪ್ಪಿದ ದುರ್ದೈವಿಗಳು ಎನ್ನಲಾಗಿದೆ. ಈ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ.
ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ ಒಂದೇ ಬಸ್ ನಲ್ಲಿ 40 ಜನರು ಮೈಸೂರಿನಿಂದ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ ಪ್ರವಾಸಕ್ಕೆಂದು ತೆರಳಿದ್ದರು. ಈ ಸಂದರ್ಭದಲ್ಲಿ ನಾಲ್ವರು ಈಜಲು ತೆರಳಿದ್ದಾರೆ. ಆಗ ಓರ್ವ ನೀರಿನಲ್ಲಿ ಮುಳುಗಿದ್ದಾನೆ. ಆತನ ರಕ್ಷಣೆಗಾಗಿ ಹೋದವರು ಒಬ್ಬರ ಹಿಂದೆ ಒಬ್ಬರಂತೆ ಮುಳುಗಿ ಸಾವನ್ನಪ್ಪಿದ್ದಾರೆ.