ಮಂಗಳೂರು: ಈಜಲು ತೆರಳಿದ್ದ ಮೂವರು ಯುವಕರು ನೀರು ಪಾಲಾಗಿರುವ ಘಟನೆ ನಡೆದಿದೆ.
ಮಂಗಳೂರು ಹೊರವಲಯದ ಪಣಂಬೂರು ಬೀಚ್ ನಲ್ಲಿ ಈ ಘಟನೆ ನಡೆದಿದೆ. ಲನ್(20), ಲಿಖಿತ್(18), ನಾಗರಾಜ್(24) ಸಾವನ್ನಪ್ಪಿದ ಯುವಕರು. ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಮಿಲನ್, ಪಿಯುಸಿ ವಿದ್ಯಾರ್ಥಿ ಲಿಖಿತ್, ನಾಗರಾಜ್ ಕಂಪನಿಯೊಂದರಲ್ಲಿ ಸೂಪರ್ ವೈಸರ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಸ್ಥಳೀಯ ಮೀನುಗಾರರು ಇದನ್ನು ಗಮನಿಸಿದ್ದಾರೆ. ಸದ್ಯ ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.