ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ನೀತಿ ಸಂಹಿತೆ ಜಾರಿಯಲ್ಲಿದ್ದ ಸಂದರ್ಭದಲ್ಲಿ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿದ್ದಾರೆಂದು ಪ್ರಕರಣ ದಾಖಲಿಸಲಾಗಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅರ್ಚಕರೊಬ್ಬರ ಮನೆಗೆ ತೆರಳಿ ಸಭೆ ನಡೆಸಿದ್ದಾರೆ. ಕುರ್ಚಿ, ಮೈಕ್ ಬಳಕೆ ಮಾಡಲಾಗಿದೆ. ಅಲ್ಲಿ ರಾಜಕೀಯ ಪ್ರೇರಿತ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂದರ್ಭದಲ್ಲಿ ಅವರು ಚುನಾವಣಾ ಕಚೇರಿಯಲ್ಲಿ ಅನುಮತಿ ಪಡೆಯಬೇಕಿತ್ತು. ಆದರೆ, ಅವರು ಆ ನಿಯಮ ಪಾಲಿಸಿಲ್ಲ. ಹೀಗಾಗಿ ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಅಸಂಜ್ಞೆಯ ಅಪರಾಧ ಪ್ರಕರಣ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.