ಕೋಲ್ಕತ್ತಾದ ಮೆಟಿಯಾಬ್ರೂಜ್‌ನಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದಿದ್ದು ಇಬ್ಬರು ಸಾವನ್ನಪ್ಪಿ, 15 ಜನ ಗಾಯಗೊಂಡಿರುವ ಘಟನೆ ನಡೆದಿದೆ.
ರಾತ್ರಿ ವೇಳೆ ಈ ಘಟನೆ ನಡೆದಿದೆ. ಗಾರ್ಡನ್ ರೀಚ್ ಪ್ರದೇಶದ ಹಜಾರಿ ಮೊಲ್ಲಾ ಬಗಾನ್‌ನಲ್ಲಿ ಈ ಘಟನೆ ನಡೆದಿದೆ. ಅವಶೇಷಗಳಡಿ ಸಿಲುಕಿರುವ ಬದುಕುಳಿದವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸಾವನ್ನಪ್ಪಿದವರ ಪೈಕಿ ಓರ್ವ ಮಹಿಳೆಯನ್ನು ಸ್ಥಳೀಯ ನಿವಾಸಿ ಹಸೀನಾ ಬೀಬಿ ಎಂದು ಗುರುತಿಸಲಾಗಿದೆ.