ಹುಬ್ಬಳ್ಳಿ: ರಾಜ್ಯದಲ್ಲಿ 2ನೇ ಹಂತದ ಮತದಾನ ಬಿರುಸಿನಿಂದ ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಿಗೆ ಬಿರುಸಿನಿಂದ ಮತದಾನ ನಡೆಯುತ್ತಿದೆ. ಹಲವಡೆ ಜನರು ಉತ್ಸಾಹದಿಂದ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ನಗರದಲ್ಲಿ ಒಂದೇ ಕುಟುಂಬದ 69 ಜನ ಮತದಾನ ಮಾಡಿ ಮಾದರಿಯಾಗಿದ್ದಾರೆ.
ತಾಲೂಕಿನ ನೂಲ್ವಿ ಗ್ರಾಮದ ಕನ್ನಡ ಹೆಣ್ಣುಮಕ್ಕಳ ಶಾಲೆಯ ಮತಗಟ್ಟೆಯಲ್ಲಿ ಏಕಕಾಲಕ್ಕೆ ಬಂದ ಒಂದೇ ಕುಟುಂಬದ 69 ಜನ ಮತದಾರರು ಮತದಾನ ಮಾಡಿದ್ದಾರೆ. ಮೂರು ತಲೆಮಾರಿನ ಕುಟುಂಬದ ಸದಸ್ಯರು ಮತದಾನದಲ್ಲಿ ಭಾಗಿಯಾಗಿದ್ದರು. ಪ್ರತಿ ಚುನಾವಣೆಯಲ್ಲಿ ಮೂರು ತಂಡವಾಗಿ ವಾಹನದ ಮೂಲಕ ಬಂದು ಕುಟುಂಬ ಮತ ಚಲಾವಣೆ ಮಾಡುತ್ತಿತ್ತು. ಆದರೆ ಈ ಬಾರಿ ಎಲ್ಲರೂ ಒಟ್ಟಾಗಿ ಬಂದು ಮತ ಚಲಾಯಿಸಿ ಮಾದರಿಯಾಗಿದ್ದಾರೆ.