ರಾಯ್ಪುರ: ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 12 ಜನ ಸಾವನ್ನಪ್ಪಿ, 14 ಜನ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ದುರ್ಗ್ ಜಿಲ್ಲೆಯ ಕಮ್ಹಾರಿ ಪ್ರದೇಶದಲ್ಲಿ ನಡೆದಿದೆ. ಕಾರ್ಮಿಕರಿದ್ದ ಬಸ್ ಹಳ್ಳಕಕ್ಕೆ ಬಿದ್ದ ಪರಿಣಾಮ ಈ ಘಟನೆ ನಡೆದಿದೆ. 12 ಜನ ಸಾವನ್ನಪ್ಪಿ, 14 ಜನ ಗಾಯಗೊಂಡಿದ್ದಾರೆಂದು ಜಿಲ್ಲಾಧಿಕಾರಿ ರಿಚಾ ಪ್ರಕಾಶ್ ಚೌಧರಿ ಹೇಳಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ, ಬಸ್ ನಲ್ಲಿ ಇನ್ನೂ ಹಲವು ಪ್ರಯಾಣಿಕರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ತೀವ್ರ ವಿಷಾಧ ವ್ಯಕ್ತಪಡಿಸಿದ ಸಿಎಂ ವಿಷ್ಣು ದೇವ್ ಸಾಯಿ, ಕಾರ್ಮಿಕರಿದ್ದ ಬಸ್ ಅಪಘಾತವಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ ಎಂದು ಬರೆದುಕೊಂಡಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ತಮ್ಮವರ ಅಗಲಿಕೆ ನೋವು ಭರವಿಸುವ ಶಕ್ತಿ ಕುಟುಂಬಸ್ಥರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.