ನವ ದೆಹಲಿ : ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಸತ್ ನಲ್ಲಿ ಭೇಟಿ ಮಾಡಿರುವುದರ ಬಗ್ಗೆ ತಮ್ಮ ಅಧಿಕೃತ ʼXʼ ಖಾತಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಸೌಹಾರ್ದಯುತವಾಗಿ ಭೇಟಿಯಾಗಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ತಿಳಿಸಿರುವ ಸಂದೇಶ ಬಗ್ಗೆ ಕುತೂಹಲ ಮೂಡಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷರ ಪುನಾರಾಯ್ಕೆ ಗೊಂದಲದ ನಡುವೆ ಬಸವರಾಜ್ ಬೊಮ್ಮಾಯಿ ಮತ್ತು ಅಮಿತ್ ಶಾ ಭೇಟಿಯಾಗಿರುವುದರ ಬಗ್ಗೆ ಪಕ್ಷದಲ್ಲಿ, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.