ಬೆಂಗಳೂರು: ಕಸ ಹಾಕುವ ವಿಚಾರಕ್ಕೆ ಗಲಾಟೆ ನಡೆದು ವೃದ್ಧೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.
ಇಲ್ಲಿಯ ಹೆಚ್ಎಎಲ್ ನ ಇಸ್ಲಾಂಪುರದಲ್ಲಿ ಈ ಘಟನೆ ನಡೆದಿದ್ದು, ದಿಲ್ ಷಾದ್(60) ಹಲ್ಲೆಗೊಳಗಾದ ವೃದ್ಧೆ.
ಖಲೀಂ ಹಲ್ಲೆ ಮಾಡಿರುವ ಆರೋಪಿ ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ದಿಲ್ ಷಾದ್ ಹಾಗೂ ಖಲೀಂ ನೆರೆಹೊರೆಯವರು. ಆದರೆ, ಈ ಕುಟುಂಬಗಳ ಮಧ್ಯೆ ಕಸದ ವಿಚಾರವಾಗಿ ಜಗಳ ನಡೆಯುತ್ತಿತ್ತು. ನಿನ್ನೆ ರಾತ್ರಿ ಕೂಡ ಕಸ ಹಾಕುವ ವಿಚಾರಕ್ಕೆ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಖಲೀಂ ದೊಣ್ಣೆಯಿಂದ ದಿಲ್ ಷಾದ್ ತಲೆಗೆ ಹೊಡೆದಿದ್ದಾನೆ. ಪರಿಣಾಮ ವೃದ್ಧೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು- ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ. ಈ ಕುರಿತು ಎಚ್ ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.