ಚಂಡೀಗಢ: ಕಾರಿನಲ್ಲಿ ಮಲಗಿದ್ದ ವ್ಯಕ್ತಿಯನ್ನು ಹೊರಗೆಳೆದು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಹರಿಯಾಣದ ಮುರ್ತಾಲ್ ನ ಡಾಬಾವೊಂದರ ಪಾರ್ಕಿಂಗ್ ಹತ್ತಿರ ನಡೆದಿದೆ. ತನ್ನ ಕಾರಿನಲ್ಲಿ ಮಲಗಿದ್ದ ವ್ಯಾಪಾರಿಯೊಬ್ಬನನ್ನು ಕಾರಿನಿಂದ ಎಳೆದು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.
ಸುಂದರ್ ಮಲಿಕ್ (38) ಕೊಲೆಯಾಗಿರುವ ವ್ಯಕ್ತಿ ಎನ್ನಲಾಗಿದೆ. ಈ ವ್ಯಕ್ತಿ ಮದ್ಯ ವ್ಯಾಪಾರಿಯಾಗಿದ್ದ ಎನ್ನಲಾಗಿದೆ. ದುಷ್ಕರ್ಮಿಗಳು ಗುಂಡು ಹಾರಿಸುತ್ತಿರುವ ದೃಷ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ 8 ವಿಶೇಷ ತಂಡ ರಚನೆ ಮಾಡಿ ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ. ಟುಂಬದ ಸದಸ್ಯರನ್ನೂ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದು ಪೊಲೀಸ್ ಅಧಿಕಾರಿ ಗೌರವ್ ರಾಜಪುರೋಹಿತ್ ಹೇಳಿದ್ದಾರೆ.
ಈ ಘಟನೆ ಗ್ಯಾಂಗ್ ವಾರ್ ದೃಷ್ಟಿಕೋನ ಒಳಗೊಂಡಿಲ್ಲ ಎಂಬುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.