ಸಾಮಾಜಿಕ ಜಾಲತಾಣದಲ್ಲಿ ಗಜಪಡೆ ಹೆಸರಿನ ಖಾತೆಯಲ್ಲಿ ಅಶ್ವಿನಿ ಪುನೀತ್ ಅವರ ಬಗ್ಗೆ ಕೆಟ್ಟದಾಗಿ ನಿಂದಿಸಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸದ್ಯ ಸ್ವತಃ ಅಶ್ವಿನಿ ಅವರೇ ಇದಕ್ಕೆ ಪ್ರತಿಕ್ರಿಯೆ ನೀಡಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ನೆಗೆಟಿವ್ ಅಥವಾ ಪಾಟಿಸಿವ್ ಏನೇ ಬಂದರೂ, ಸಮಾನಾಗಿ ಸ್ವೀಕರಿಸಿ ಮುಂದೆ ಸಾಗಬೇಕು ಎಂದು ಹೇಳಿದ್ದಾರೆ. ಅಶ್ವಿನಿ ಅವರ ಕುರಿತು ಆ ರೀತಿ ಮಾತನಾಡಿದ್ದಕ್ಕೆ ಮಹಿಳಾ ಬರಹಗಾರರು ಮತ್ತು ಕಲಾವಿದರು ಧ್ವನಿ ಎತ್ತಿದ್ದಾರೆ. ಈ ಕುರಿತಂತೆ ತಮ್ಮದೇ ಆದ ನಿಲುವನ್ನು ವ್ಯಕ್ತಪಡಿಸಿದ್ದಾರೆ.
ಅಲ್ಲದೇ, ಪೋಸ್ಟ್ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಆರ್ ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದ ಅನಾಮಿಕ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದಕ್ಕೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.