ಭೋಪಾಲ್: ದಕ್ಷಿಣ ಆಫ್ರಿಕಾದಿಂದ ಬಂದಿದ್ದ 5 ವರ್ಷದ ಚೀತಾ 5 ಮರಿಗಳಿಗೆ ಜನ್ಮ ನೀಡಿದೆ. ಈ ಮೂಲಕ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಒಟ್ಟು ಚೀತಾಗಳ ಸಂಖ್ಯೆ 26ಕ್ಕೆ ಏರಿಕೆ ಕಂಡಿದೆ.
ಇದರಲ್ಲಿ ಭಾರತದಲ್ಲಿ ಜನಿಸಿದ 13 ಮರಿಗಳೂ ಸೇರಿವೆ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಹೇಳಿದ್ದಾರೆ. ಸುಮಾರು 5 ವರ್ಷ ಪ್ರಾಯದ ಹೆಣ್ಣು ಚೀತಾ ಗಾಮಿನಿ ಭಾನುವಾರ 5 ಮರಿಗಳಿಗೆ ಜನ್ಮ ನೀಡಿದ್ದು, ಭಾರತದಲ್ಲಿ ಜನಿಸಿದ ಚೀತಾ ಮರಿಗಳ ಸಂಖ್ಯೆ 13ಕ್ಕೆ ಏರಿಕೆಯಾಗಿವೆ. ಚೀತಾವನ್ನು ದಕ್ಷಿಣ ಆಫ್ರಿಕಾದ ತ್ಸ್ವಾಲು ಕಲಹರಿ ಮೀಸಲು ಪ್ರದೇಶದಿಂದ ತರಲಾಗಿತ್ತು ಎಂದು ಅವರು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ಅರಣ್ಯಾಧಿಕಾರಿಗಳು, ಪಶು ವೈದ್ಯರು ಹಾಗೂ ರಕ್ಷಣಾ ಸಿಬ್ಬಂದಿ ತಂಡವು ಚೀತಾಗಳಿಗೆ ಒತ್ತಡ ರಹಿತ ವಾತಾವರಣ ಕಲ್ಪಿಸಿಕೊಟ್ಟಿದ್ದಾರೆ. ಚೀತಾಗಳ ಜನನ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಕುನೋದಲ್ಲಿ ಒಟ್ಟು ಚೀತಾಗಳ ಸಂಖ್ಯೆ 26ಕ್ಕೆ ಏರಿಯಾಗಿದೆ.