ಎಲ್ಲೆಡೆ ಯುಗಾದಿ ಹಬ್ಬದ ಸಂಭ್ರಮವಿದೆ. ಈ ಮಧ್ಯೆ ಗೋಲ್ಡನ್ ಸ್ಟಾರ್ ಗಣೇಶ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಪೋಸ್ಟರ್ ನ್ನು ಚಿತ್ರ ತಂಡ ಬಿಡುಗಡೆ ಮಾಡಿ ಅಭಿಮಾನಿಗಳಿಗೆ ಗಿಫ್ಟ್ ನೀಡಿದೆ.
ಈ ಚಿತ್ರ ಗೋಲ್ಡನ್ ಸ್ಟಾರ್ ಅಭಿನಯದ 41ನೇ ಸಿನಿಮಾ. ಮಾಳವಿಕ ನಾಯರ್ ಗಣೇಶಗೆ ಜೋಡಿಯಾಗಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲಿಯೇ ಚಿತ್ರಮಂದಿರಗಳಿಗೆ ಅಪ್ಪಳಿಸಲಿದೆ. ಶ್ರೀನಿವಾಸರಾಜು ಈ ಚಿತ್ರಕ್ಕೆ ಕ್ಯಾಪ್ ತೊಟ್ಟಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಮಾಡಿದ್ದಾರೆ.
ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಸೇರಿದಂತೆ ಹಲವರು ಚಿತ್ರದಲ್ಲಿ ನಟಿಸಿದ್ದಾರೆ.