ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಲ್ಲಿಂದಲೇ ಅಧಿಕಾರ ನಡೆಸಲು ಸಾಧ್ಯವಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಹೇಳಿದ್ದಾರೆ.
ಈಗ ಅರವಿಂದ್ ಇಡಿ ಕಸ್ಟಡಿಯಲ್ಲಿದ್ದು, ಜೈಲಿನಿಂದಲೇ ಎರಡು ಸರ್ಕಾರಿ ಆದೇಶ ಹೊರಡಿಸಿದ್ದಾರೆ. ಬಂಧನಕ್ಕೊಳಗಾಗಿದ್ದರೂ ಯಾವುದೇ ಕಾರಣ್ಕಕೂ ಕೇಜ್ರಿವಾಲ್ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ದೆಹಲಿ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಆನಂತರ ಅವರಿಗೆ ನ್ಯಾಯಾಲಯ ಮಾರ್ಚ್ 28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿದೆ. ಆದರೆ, ಕೇಜ್ರಿವಾಲ್ ಮಧ್ಯಂತರ ರಿಲೀಫ್ ಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಕೇಜ್ರಿವಾಲ್ ಮನವಿಗೆ ಸಂಬಂಧಿಸಿದಂತೆ ನೋಟಿಸ್‌ಗಳನ್ನು ಮಾತ್ರ ಹೊರಡಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಏಪ್ರಿಲ್ 3 ಕ್ಕೆ ಮುಂದೂಡಿ ಆದೇಶಿಸಿದೆ.