ಬೆಂಗಳೂರು: ಬಾವನೇ ಬಾಮೈದನನ್ನು ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.
ಈ ಘಟನೆ ನಗರದ ವೆಂಕಟೇಶ್ವರಪುರದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಾಮೈದ ಕೊಲೆಯಾಗಿದ್ದಾನೆ ಎನ್ನಲಾಗಿದೆ.
ಆರೋಪಿ ಲಕ್ಷ್ಮಣ ಹಾಗೂ ಆತನ ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಈ ವಿಚಾರಕ್ಕಾಗಿ ಬಾವ ಹಾಗೂ ಬಾಮೈದರು ಕೂಡ ಜಗಳ ಮಾಡುತ್ತಿದ್ದರು. ನಿನ್ನೆ ಕೂಡ ಇದೇ ವಿಷಯವಾಗಿ ಜಗಳ ಮಾಡಿದ್ದಾರೆ. ಬಾಮೈದನ ಮೇಲೆ ಬಾವ ಹೆಚ್ಚಾಗಿ ಸಿಟ್ಟಾಗಿದ್ದರು. ಇನ್ನೊಂದೆಡೆ ಯುಗಾದಿ ಹಬ್ಬದ ಪ್ರಯುಕ್ತ ವೆಂಕಟೇಶ್ವರಪುರದ ಗಲ್ಲಿಯಲ್ಲಿ ಇಸ್ಪೀಟ್ ನಡೆಯುತ್ತಿತ್ತು.
ಈ ಸಂದರ್ಭದಲ್ಲಿ ಆಡುತ್ತಿದ್ದ ವೇಳೆ ಚಾಕು ಇರಿದು ಕೊಲೆ ಮಾಡಿದ್ದಾನೆ. ಕಿರಣ್ ಕುಮಾರ್ ಹತ್ಯೆಗೆ ಲಕ್ಷ್ಮಣ ಮೊದಲೇ ಸಂಚು ರೂಪಿಸಿದ್ದ. ಹೀಗಾಗಿಯೇ ಚಾಕು ಇಟ್ಟುಕೊಂಡು ಬಂದಿದ್ದಾನೆ. ಇಸ್ಪೀಟ್ ಎಲೆಗಳ ಮೇಲಿದ್ದ ಹಣ ಎತ್ತಲು ಕಿರಣ್ ಕುಮಾರ್ ಬಗ್ಗಿದಾಗ ಬೆನ್ನಿಗೆ ಭಾವ ಲಕ್ಷ್ಮಣ ಚಾಕುವಿನಿಂದ ಇರಿದಿದ್ದಾನೆ. ಗಾಯಾಳು ಕಿರಣ್ ಕುಮಾರ್ನನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದರೂ ಸಾವನ್ನಪ್ಪಿದ್ದಾರೆ. ಈ ಕುರಿತು ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.