ಇತ್ತೀಚೆಗೆ 17ನೇ ಆವೃತ್ತಿಯ ಐಪಿಎಲ್ ಆಯೋಜನೆಗೆ ಸಂಬಂಧಿಸಿದಂತೆ ಗಾಳಿ ಸುದ್ದಿಯೊಂದು ಹಬ್ಬಿತ್ತು. ಈ ಬಾರಿಯ ಐಪಿಎಲ್ ವಿದೇಶಿದಲ್ಲಿ ನಡೆಯಲ್ಲಿದೆ ಎಂಬ ವದಂತಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬ್ರೇಕ್ ಹಾಕಿದ್ದಾರೆ.
ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ ಮಾತನಾಡಿದ ಜಯ್ ಶಾ, ಈ ಬಾರಿಯ ಐಪಿಎಲ್ ಅನ್ನು ವಿದೇಶಕ್ಕೆ ಸ್ಥಳಾಂತರಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ಚುನಾವಣಾ ಆಯೋಗ ಪ್ರಕಟಿಸಿದ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಗಮನಿಸಿದ ನಂತರ ಮೊದಲಾರ್ಧದ ಐಪಿಎಲ್ ಮುಗಿದ ನಂತರ ಇನ್ನುಳಿದ ಪಂದ್ಯಗಳನ್ನು ಯುಎಇನಲ್ಲಿ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿತ್ತು. ಆದರೆ, 2024 ರ ಸಂಪೂರ್ಣ ಆವೃತ್ತಿಯು ಭಾರತದಲ್ಲಿಯೇ ನಡೆಯಲಿದೆ ಎಂದು ಜಯ್ ಶಾ ಹೇಳಿದ್ದಾರೆ.
ಹೀಗಾಗಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಐಪಿಎಲ್‌ನ 17 ನೇ ಆವೃತ್ತಿಯ ಮೊದಲಾರ್ಧದಲ್ಲಿ 21 ಪಂದ್ಯಗಳು ನಡೆಯಲಿವೆ. ಮಾರ್ಚ್ 22 ರಂದು ಲೀಗ್ ನ ಮೊದಲ ಪಂದ್ಯವನ್ನು ಆರ್ ಸಿಬಿ ಹಾಗೂ ಸಿಎಸ್ ಕೆ ತಂಡ ಆಡಲಿವೆ.