ತುಮಕೂರು: ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಮೇಲೆ ಎಫ್ ಐಆರ್ ದಾಖಲಾಗಿದೆ.
ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಟೆಂಡರ್ ಕಾಮಗಾರಿಯಲ್ಲಿ ಅನ್ಯಾಯ ಖಂಡಿಸಿ, ಪಿಡಬ್ಲ್ಯೂಡಿ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ರಾಯಸಂದ್ರ ರವಿಕುಮಾರ್ ಧರಣಿ ನಡೆಸಿದ್ದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರ ರಾಯಸಂದ್ರ ರವಿಕುಮಾರ್ ಮೇಲೆ ಶಾಸಕ ಎಸ್ ಆರ್ ಶ್ರೀನಿವಾಸ್ ಹಾಗೂ ಸಹಚರರು ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ರಾಯಸಂದ್ರ ರವಿಕುಮಾರ್ ದೂರು ದಾಖಲಿಸಿದ್ದಾರೆ.