ಮಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಇರುವ ಹಿನ್ನೆಲೆಯಲ್ಲಿ ಗೂಂಡಾ ಕಾಯ್ದೆಯಡಿ ಹಿಂದೂ ಕಾರ್ಯಕರ್ತ ಜಯಪ್ರಶಾಂತ್ ಅರೆಸ್ಟ್ ಆಗಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ.
ವಿಶ್ವ ಹಿಂದೂ ಪರಿಷತ್ ಮುಖಂಡ ಶಿವಾನಂದ ಮೆಂಡನ್ ಈ ಕುರಿತು ಮಾತನಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಒಂದು ಕೇಸ್ ಗೆ ಪೊಲೀಸರು ಮೂರು ಎಫ್ಐಆರ್ ದಾಖಲಿಸಿದ್ದಾರೆ. ಈ ಹಿಂದೆ ಸೆಗಣಿ ಎರಚಿದ್ದಕ್ಕೆ ಪ್ರದೀಪ್ ವಿರುದ್ಧ ಸೆಕ್ಷನ್ 307 ಹಾಕಿದ್ದರು. ಪಾಕಿಸ್ತಾನ ಪರ ಘೋಷಣೆ ಹಾಕಿದ ಆರೋಪಿಗಳ ಮೇಲೆ ಕೇಸ್ ಹಾಕುವುದಿಲ್ಲ. ಹಿಂದೂ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನವರು ಭಜರಂಗದಳ ಬ್ಯಾನ್ ಎಂದು ಸುಳ್ಳು ಹೇಳಿದ್ದರು. ಅದರಿಂದ ಅಲ್ಪಸಂಖ್ಯಾತರ ಮತ ಸಿಗುತ್ತೆ ಎಂದು ಯೋಚಿಸಲಾಗಿತ್ತು. ಇದೀಗ ಚುನಾವಣೆಯ ಸಂದರ್ಭದಲ್ಲಿ ಮತ್ತೆ ನಮ್ಮ ಧಮನ ಮಾಡುವ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.