ನವದೆಹಲಿ: ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ನಾಯಕರು ಸೇರಿದಂತೆ 10 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆ ನಡೆಸುತ್ತಿದ್ದ ತೃಣಮೂಲ ಕಾಂಗ್ರೆಸ್ ನ ಸಂಸದರು ಸೇರಿದಂತೆ ನಾಯಕರನ್ನು ವಶಕ್ಕೆ ಪಡೆಯಲಾಗಿದೆ. ತೃಣಮೂಲ ಕಾಂಗ್ರೆಸ್ ಸದಸ್ಯರು ಜಾರಿ ನಿರ್ದೇಶನಾಲಯ, ಕೇಂದ್ರೀಯ ತನಿಖಾ ದಳ, ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಆದಾಯ ತೆರಿಗೆ ಇಲಾಖೆ ಮುಖ್ಯಸ್ಥರನ್ನು ಬದಲಾಯಿಸಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆ.
ಡೆರೆಕ್ ಒ’ಬ್ರೇನ್, ಡೋಲಾ ಸೇನ್, ಸಾಕೇತ್ ಗೋಖಲೆ ಮತ್ತು ಸಾಗರಿಕಾ ಘೋಸ್ ಸೇರಿದಂತೆ ತೃಣಮೂಲ ಕಾಂಗ್ರೆಸ್‌ನ ಹತ್ತು ಸದಸ್ಯರ ನಿಯೋಗವು ಚುನಾವಣಾ ಆಯೋಗದ ಎದುರು ಪ್ರತಿಭಟನೆ ನಡೆಸುತ್ತಿತ್ತು. 24 ಗಂಟೆಗಳ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಚುನಾವಣಾ ಆಯೋಗದ ಕಚೇರಿಯ ಹೊರಗೆ ಸೇನ್ ತಿಳಿಸಿದ್ದರು. ಬಿಜೆಪಿ ನೇತೃತ್ವದ ಕೇಂದ್ರದ ನಿರ್ದೇಶನದ ಮೇರೆಗೆ ಕೇಂದ್ರೀಯ ಸಂಸ್ಥೆಗಳು ವರ್ತಿಸುತ್ತಿವೆ ಎಂದು ಆರೋಪಿಸಿದ್ದರು.