ಬೆಂಗಳೂರು: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಜ್ಯದಿಂದ ತಮಿಳುನಾಡಿಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಜೀಪ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕೆಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ಹಾಗೂ ಪೊಲೀಸ್ ಪೇದೆ ಸಾವನ್ನಪ್ಪಿದ್ದಾರೆ. ಈ ಘಟನೆ ತಮಿಳುನಾಡಿನ ಕಿಲ್ಪೆನ್ನತುರ್ ಎಂಬಲ್ಲಿ ನಡೆದಿದೆ.
ಕೆಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ಪ್ರಭಾಕರ್ ಹಾಗೂ ತಮಿಳುನಾಡು ಕಾನ್ಸ್‌ಟೇಬಲ್ ದಿನೇಶ್ ಸಾವನ್ನಪ್ಪಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ ಇನ್ನೂ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಿರುವಣ್ಣಾಮಲೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೇಮಂತ್ ಕುಮಾರ್ (ಡೆಪ್ಯೂಟಿ ಕಮಾಂಡರ್), ವಿಟ್ಠಲ್ ಗಡಾದರ್ (ಹೆಡ್ ಕಾನ್ಸ್‌ಟೇಬಲ್), ಜಯಕುಮಾರ್ (ಕಾನ್ಸ್‌ಟೇಬಲ್) ಗಾಯಗೊಂಡಿದ್ದಾರೆ.