ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಸ್ ಕಂಡಕ್ಟರ್ ಮಹಿಳೆಯ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಟಿಕೆಟ್ ವಿಚಾರವಾಗಿ ಮಹಿಳೆಯ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು, ಈ ಘಟನೆ ಸಿದ್ದಾಪುರ ವ್ಯಾಪ್ತಿಯಲ್ಲಿ ನಡೆದಿದೆ. ತನ್ಜಿಲಾ ಇಸ್ಮಾಯಿಲ್ ಎಂಬ ಮಹಿಳೆ ಬಸ್ ಹತ್ತಿ ಟಿಕೆಟ್ ಕೇಳಿದ್ದಾರೆ. ಆಗ ನಿರ್ವಾಹಕ ಟಿಕೆಟ್ ಕೊಡುವುದಾಗಿ ಹೇಳಿದ್ದಾರೆ. ಇದೇ ವಿಚಾರವಾಗಿ ಮಾತಿಗೆ ಮಾತು ಬೆಳೆದು ರೊಚ್ಚಿಗೆದ್ದ ಕಂಡಕ್ಟರ್, ಹಲ್ಲೆ ನಡೆಸಿದ್ದಾನೆ. ಈ ಕುರಿತು ಪ್ರಕರಣ ದಾಖಲಾಗಿದೆ.
ಇತ್ತೀಚೆಗಷ್ಟೇ ಬಿಎಂಟಿಸಿ ಬಸ್ ನಲ್ಲಿ ಓರ್ವ ಮಹಿಳೆಯಿಂದ ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಸದ್ಯ ನಿರ್ವಹಾಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.