ರಾಮನಗರ: ಲೋಕಸಭಾ ಚುನಾವಣೆಯ ಕಾವು ರಾಜ್ಯದಲ್ಲಿ ರಂಗೇರಿದೆ. ರಾಜ್ಯದಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಡಿಕೆ ಬ್ರದರ್ಸ್ ಕೋಟೆಯಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಪರ ಅವರು ಚುನಾವಣಾ ಪ್ರಚಾರ ನಡೆಸಿದ್ದಾರೆ. ಇದರ ಭಾಗವಾಗಿ ಚನ್ನಪಟ್ಟಣದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಅಮಿತ್ ಶಾ ಅವರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಡಾ. ಮಂಜುನಾಥ್, ನಿಖಿಲ್ ಕುಮಾರಸ್ವಾಮಿ, ಸಿ.ಪಿ ಯೋಗೇಶ್ವರ್ ಸೇರಿದಂತೆ ಹಲವು ಗಣ್ಯರು ಸಾಥ್ ನೀಡಿದರು.
ರೋಡ್ ಶೋ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು, ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಈ ವೇಳೆ ಜೈ ಶ್ರೀರಾಮ’ ಘೋಷಣೆ ಕೂಗಿದ್ದಾರೆ. ಮೆರವಣಿಗೆ ಉದ್ದಕ್ಕೂ
ಜೈ ಶ್ರೀರಾಮ್, ಮೋದಿ ಮೋದಿ’ ಅಂತಾ ಘೋಷಣೆ ಕೂಗುತ್ತಲೇ ಉತ್ಸಾಹ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಅಮಿತ್ ಶಾ ಮೇಲೆ ಜನರು ಹೂಮಳೆ ಸುರಿಸಿದ್ದಾರೆ. ರೋಡ್ ಶೋ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಬಾಂಬ್ ಸ್ಕ್ವಾಡ್ ಮತ್ತು ಶ್ವಾನದಳಗಳಿಂದ ತಪಾಸಣೆ ನಡೆಸಲಾಗಿತ್ತು.