ಚಿಕ್ಕಮಗಳೂರು: ಪತಿ- ಪತ್ನಿಯ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ತನ್ನಿಂದ ದೂರವಾಗಿದ್ದಕ್ಕೆ ಕೋಪಗೊಂಡು ಪತ್ನಿಯನ್ನೇ ಕೊಲೆ ಮಾಡರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ತರೀಕೆರೆ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ. ಮೇಘಾ(20) ಕೊಲೆಯಾದ ದುರ್ದೈವ ಪತ್ನಿ. ಮಹಿಳೆಯು ಬಟ್ಟೆ ತೊಳೆಯುವುದಕ್ಕಾಗಿ ಕೆರೆಗೆ ಹೋಗಿದ್ದ ಸಂದರ್ಭದಲ್ಲಿ ಬಟ್ಟೆ ತೊಳೆಯಲು ತೆರಳಿದ್ದಾಗ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಚರಣ್ ಕೊಲೆ ಮಾಡಿರುವ ಪತಿ. ಇಬ್ಬರೂ ಕೆಲವು ವರ್ಷಗಳಿಂದ ಪ್ರೀತಿಯಲ್ಲಿ ಬಿದ್ದಿದ್ದರು. ಆನಂತರ ಇಬ್ಬರೂ ಸೇರಿಕೊಂಡು ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದರು. ಆದರೆ, ಇಬ್ಬರ ಮಧ್ಯೆ ಹೊಂದಾಣಿಕೆ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಇಬ್ಬರೂ ದೂರವಾಗಿದ್ದರು. ಮೇಘಾ ಪತಿಯನ್ನು ಬಿಟ್ಟು ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದರು. ಆದರೆ, ಇದಕ್ಕೆ ಕುಪಿತಗೊಂಡಿದ್ದ ಪತಿ ಹೊಂಚುಹಾಕಿ ಕೊಲೆ ಮಾಡಿದ್ದಾನೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕೃತ್ಯ ಎಸಗಿ ಆರೋಪಿ ಪರಾರಿಯಾಗಿದ್ದಾನೆ. ಸದ್ಯ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.