ದೆಹಲಿ: ಚುನಾವಣಾ ಆಯೋಗ 2024ರ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸಿದೆ.
ಈ ಬಾರಿ ಕೂಡ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ರಂದು ಎರಡನೇ ಹಂತದ ಮತದಾನ, ಏಪ್ರಿಲ್ 26ರಂದು ಎರಡನೇ ಹಂತದ ಮತದಾನ, ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
ಮೇ 13 ರಂದು ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಏಪ್ರಿಲ್ 19 ರಂದು ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ. .
ಲೋಕಸಭೆಯ ಅವಧಿಯು 16 ನೇ ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರ ಪ್ರದೇಶ, ಒಡಿಶಾ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಗಳ ಅವಧಿಯು ಜೂನ್ ನಲ್ಲಿ ಮುಗಿಯಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಕುಮಾರ್ ಹೇಳಿದ್ದಾರೆ.