ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಲಾರಿಯೊಂದು ಹೊತ್ತಿ ಉರಿದ ಘಟನೆ ನಡೆದಿದೆ.
ಬೆಂಗಳೂರಿನ ಉತ್ತರ ತಾಲೂಕಿನ ಅಂಚೆಪಾಳ್ಯ ಹತ್ತಿರ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಲಾರಿ ಎಲೆಕ್ಟ್ರಾನಿಕ್ ವಸ್ತುಗಳನ್ನು ತುಂಬಿಕೊಂಡು ಕನಕಪುರದಿಂದ ವಿಶಾಖಪಟ್ಟಣಕ್ಕೆ ಹೊತ್ತುಕೊಂಡು ಸಾಗುತ್ತಿತ್ತು. ಈ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಕೂಡಲೇ ಪೀಣ್ಯಾ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹೀಗಾಗಿ ರಾಷ್ಟ್ರೀಯ 4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.