ಬೆಂಗಳೂರು: ಕಾಂಗ್ರೆಸ್ ನ ಹಲವು ನಾಯಕರ ವಿರುದ್ಧ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಸಿಎಂ ಸಿದ್ದರಾಮಯ್ಯ, ಸಚಿವ ಡಿ. ಸುಧಾಕರ್, ಸೌಮ್ಯಾ ರೆಡ್ಡಿ ವಿರುದ್ಧ ದೂರು ಸಲ್ಲಿಸಲಾಗಿದೆ.
ಬಿಜೆಪಿಯ ಕಾನೂನು ವಿಭಾಗದ ಮುಖ್ಯಸ್ಥ ವಿವೇಕ್ ರೆಡ್ಡಿ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ. ಬಳ್ಳಾರಿಯಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಸ್ವಾಗತದ ವಿಚಾರದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅಕ್ಕಿ ವಿಷಯದಲ್ಲಿ ಟ್ವೀಟ್ ಮಾಡಿದ್ದಾರೆ. ಚಿತ್ರದುರ್ಗದಲ್ಲಿ 70 ಸಾವಿರ ಲೀಡ್ ಕೊಟ್ಟರೆ 25 ಕೋಟಿ ರೂ. ಅನುದಾನ ಕೊಡಸ್ತೇನಿ ಎಂದು ಡಿ. ಸುಧಾಕರ್ ಹೇಳಿಕೆ ವಿರುದ್ಧ ದೂರು ಸಲ್ಲಿಸಲಾಗಿದೆ.
ಅಲ್ಲದೇ, 5 ಗ್ಯಾರಂಟಿ ಕೊಟ್ಟಿದ್ದೇವೆ ಎಂಬ ಕರಪತ್ರವನ್ನು ಸೌಮ್ಯ ರೆಡ್ಡಿ ಹಂಚಿದ್ದಾರೆ ಎಂದು ಆರೋಪಿಸಿ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.