ನೆಲಮಂಗಲ | ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ.
ಅಪಘಾತದಲ್ಲಿ ಪವಾಡ ಎಂಬಂತೆ ಬೊಲೆರೋ ಪಿಕ್-ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ನೀವು ‘ಅಜರಾಮರ’ರಾಗಲು ಇಲ್ಲಿದೆ ಹೊಸ ಮಾರ್ಗ.. ಇದು ಎಲಾನ್ ಮಸ್ಕ್ ಐಡಿಯಾ



















