ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ತಡವಾಗಿ ಹೋಗಿದ್ದಕ್ಕೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಅವಕಾಶ ನೀಡಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ತೆಲಂಗಾಣದ ಆದಿಲಾಬಾದ್ ಜಿಲ್ಲೆಯ ಮಂಗುರ್ಲಾ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿ ಆತ್ಮಹತ್ಯೆ ಪತ್ರ ಬರೆದಿಟ್ಟು ನೀರಾವರಿ ಕಾಲುವೆಗೆ ಹಾರಿ ಪ್ರಾಣ ಬಿಟ್ಟಿದ್ದಾನೆ.
17 ವರ್ಷದ ವಿದ್ಯಾರ್ಥಿ ಬೆಳಗ್ಗೆ 9.15 ಕ್ಕೆ ಪರೀಕ್ಷಾ ಕೇಂದ್ರ ತಲುಪಿದ್ದಾನೆ ಎಂದು ವರದಿಯಾಗಿದೆ. ಆದರೆ ಪರೀಕ್ಷೆಯು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ನಡೆಯುತ್ತಿತ್ತು.
ವಿದ್ಯಾರ್ಥಿಯು ತನ್ನ ಆತ್ಮಹತ್ಯೆ ಪತ್ರದಲ್ಲಿ ಪರೀಕ್ಷೆ ಕೇಂದ್ರಕ್ಕೆ ತಡವಾಗಿ ತಲುಪಿದ್ದರಿಂದ ಪರೀಕ್ಷೆಗೆ ಹಾಜರಾಗಲು ಅವಕಾಶ ಸಿಕ್ಕಿಲ್ಲ ಎಂದು ತನ್ನ ತಂದೆಗೆ ಕ್ಷಮೆಯಾಚಿಸಿದ್ದಾನೆ ಎನ್ನಲಾಗಿದೆ.
ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.