ದಾವಣಗೆರೆ: ಉಪಸವಾಸ ಅಂತ್ಯಗೊಳಿಸಿ ಪಾನಿಪುರಿ ತಿಂದ 19 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಲೆಬೆನ್ನೂರಿನ ಜಾಮಿಯಾ ಮಸೀದಿ ಬಳಿ ಘಟನೆ ನಡೆದಿದ್ದು, ಉಪವಾಸ ಅಂತ್ಯ ಮಾಡಿದ ನಂತರ ಮಸೀದಿ ಮುಂದೆ ಮಾರಾಟ ಮಾಡುತ್ತಿದ್ದ ಪಾನಿಪುರಿ ತಿಂದು 19 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಪಾನಿಪುರಿ ತಿಂದು ಕೆಲವೇ ಹೊತ್ತಿನಲ್ಲಿ ವಾಂತಿಯಾಗಿ ಮಕ್ಕಳು ಅಸ್ವಸ್ಥರಾಗಿದ್ದಾರೆ.
ಮಕ್ಕಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. 19 ಮಕ್ಕಳ ಪೈಕಿ 4 ಮಕ್ಕಳ ಆರೋಗ್ಯ ಚಿಂತಾಜನಕವಾಗಿದೆ. ತೀವ್ರ ನಿಗಾ ಘಟಕದಲ್ಲಿ ಮಕ್ಕಳನ್ನು ದಾಖಲಿಸಿ ಚಿಕಿತ್ಸ ನೀಡಲಾಗುತ್ತಿದೆ. ಹರಿಹರ ತಹಶೀಲ್ದಾರ್ ಗುರುಬಸವರಾಜ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.