ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮುಖಂಡನ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿ.ಎಸ್. ಮಂಜುನಾಥ್ ವಿರುದ್ಧ ಚಿತ್ರದುರ್ಗ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ ದೂರು ನೀಡಿದ್ದಾರೆ.
ನರೇಂದ್ರ ಮೋದಿ ನನ್ನ ಕೈಗೆ ಸಿಕ್ರೆ ಕಾಲಲ್ಲಿರೋದು ತೆಗೆದು ಹೊಡೀತಿನಿ ಎಂದು ಕಾಂಗ್ರೆಸ್ ಮುಖಂಡ ಮಂಜುನಾಥ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಚುನಾವಣೆ ಸಂದರ್ಭದಲ್ಲಿ ಮೋದಿ ಸಿಲಿಂಡರ್ ದರ 100 ರೂ. ಕಡಿಮೆ ಮಾಡಿದ್ದಾರೆ. ನನಗೇನಾದರು ಸಿಕ್ಕರೆ ಕಾಲಿನಲ್ಲಿರುವುದು ತೆಗೆದು ಹೊಡೆಯುತ್ತಿದ್ದೆ ಎಂದು ಹೇಳಿಕೆ ನೀಡಿದ್ದರು. ಇದು ಭಾರೀ ವೈರಲ್ ಆಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿತ್ತು.