ಪ್ರೇಮಲೋಕ 2 ಚಿತ್ರಕ್ಕಾಗಿ ಕ್ರೇಜಿಸ್ಟಾರ್ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಚಂದನವನದಲ್ಲಿ ಹಲವು ದಿನಗಳಿಂದಲೂ ಕೇಳಿ ಬರುತ್ತಿತ್ತು. ಆದರೆ, ಈಗ ಅದಕ್ಕೆ ಸ್ಪಷ್ಟನೆ ಸಿಕ್ಕಿದೆ.
ಕ್ರೇಜಿಸ್ಟಾರ್ ಈ ಚಿತ್ರದ ಎರಡನೇ ಭಾಗವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ತಮ್ಮಿಬ್ಬರು ಮಕ್ಕಳಿಗೆ ಅವಕಾಶ ನೀಡಿದ್ದಾರೆ. ಆ ಪಾತ್ರಕ್ಕಾಗಿ ತಯಾರಿ ಕೂಡ ನಡೆಯುತ್ತಿದೆ. ಪ್ರೇಮಲೋಕ 2 ಚಿತ್ರದಲ್ಲಿನ ಡಾನ್ಸ್ ಹಾಗೂ ಚಿತ್ರಕ್ಕಾಗಿ ದೇಹ ಸಿದ್ಧಮಾಡಿಕೊಳ್ಳುತ್ತಿದ್ದಾರೆ.
1987ರಲ್ಲಿ ತೆರೆ ಕಂಡಿದ್ದ ರವಿಚಂದ್ರನ್ ಅಭಿನಯದ ಪ್ರೇಮಲೋಕ ಸಾಕಷ್ಟು ಹೆಸರು ಮಾಡಿತ್ತು. ಕನ್ನಡ ಚಿತ್ರರಂಗದಲ್ಲಿ ಕ್ರಾಂತಿಯನ್ನೇ ಈ ಚಿತ್ರ ಸೃಷ್ಟಿಸಿತ್ತು. ಈ ಚಿತ್ರದಲ್ಲಿ ನಟಿಸಿದ್ದ ರವಿಚಂದ್ರನ್ ಅಭಿಮಾನಿಗಳ ಪಾಲಿಗೆ ಪ್ರೀತಿಯ ಗುರು ಆಗಿದ್ದರು. ಆ ಪ್ರೇಮಲೋಕವನ್ನು ರವಿಚಂದ್ರನ್ ತಾವೇ ನಿರ್ದೇಶಿಸಿ, ನಟಿಸಿ ಗೆಲುವು ಕಂಡಿದ್ದರು.
ಪ್ರೇಮಲೋಕ ಪಾರ್ಟ್ 2 ಸಿನಿಮಾ ಮಾಡಲು ಮುಂದಾಗಿದ್ದಾರೆ. ಮೇ 30ರಿಂದ ಶೂಟಿಂಗ್ ಕೂಡ ಆರಂಭವಾಗುತ್ತಿದೆ ಎನ್ನಲಾಗಿದೆ. ಈ ಚಿತ್ರದ ಕುರಿತು ಸದ್ಯ ರವಿಚಂದ್ರನ್ ಅಪ್ಡೇಟ್ ನೀಡಿದ್ದಾರೆ. 30ರಂದು ‘ಪ್ರೇಮಲೋಕ 2’ ಸಿನಿಮಾ ಆರಂಭಿಸುತ್ತೇನೆ. ನನ್ನ ದೊಡ್ಡ ಮಗ ಮನೋರಂಜನ್ ಅದರಲ್ಲಿ ನಟಿಸುತ್ತಿದ್ದಾನೆ. ಚಿಕ್ಕ ಮಗ ವಿಕ್ರಮ್ ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾನೆ. ನಾನು ತಂದೆ ಪಾತ್ರದಲ್ಲಿ ನಟಿಸುತ್ತಿದ್ದೇನೆ ಎಂದು ಕ್ರೇಜಿ ಸ್ಟಾರ್ ಹೇಳಿದ್ದಾರೆ.
ಪ್ರೇಮಲೋಕ 2’ ಸಿನಿಮಾದಲ್ಲಿ 20 ರಿಂದ 25 ಹಾಡುಗಳಿರುತ್ತವೆ. ಸಿನಿಮಾ ಚಿಕ್ಕವರಿಂದಿಡಿದು ದೊಡ್ಡವರ ತನಕ ಎಲ್ಲರಿಗೂ ಕಾಡುತ್ತದೆ. ಈ ಸಿನಿಮಾದಲ್ಲಿ ಪ್ರೀತಿ ಇದೆ, ಜಾತಿ ಇಲ್ಲ. ಭೇದ ಭಾವ ಇಲ್ಲ, ಹಣದ ಕುರಿತು ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಅಭಿಮಾನಿಗಳಲ್ಲಿ ಈ ಚಿತ್ರದ ಕುರಿತು ಸಾಕಷ್ಟು ನಿರೀಕ್ಷೆ ಹುಟ್ಟಿದೆ.