ಐಪಿಎಲ್ ನಲ್ಲಿ ಮಂಗಳವಾರ ಕೆಕೆಆರ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸುವ ಮೂಲಕ ಗೆಲುವು ತಂದಿದ್ದಾರೆ. ಈ ಮೂಲಕ ಗೇಯ್ಲ್ ದಾಖಲೆ ಮುರಿದಿದ್ದಾರೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿತ್ತು. ಈ ಬೃಹತ್ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡದ ಜೋಸ್ ಬಟ್ಲರ್ ಏಕಾಂಗಿ ಹೋರಾಟದ ಫಲವಾಗಿ ಗೆಲುವು ಸಾಧಿಸಿತು. 60 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್, 9 ಫೋರ್ ಗಳೊಂದಿಗೆ ಅಜೇಯ 107 ರನ್ ಬಾರಿಸಿ 20ನೇ ಓವರ್ನ ಕೊನೆಯ ಎಸೆತದಲ್ಲಿ ಗೆಲುವು ತಂದುಕೊಟ್ಟರು.
ಈ ಭರ್ಜರಿ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಬಟ್ಲರ್ ದ್ವಿತೀಯ ಸ್ಥಾನಕ್ಕೆ ಏರಿದ್ದಾರೆ. ಈ ಮೂಲಕ ಕ್ರಿಸ್ ಗೇಲ್ ದಾಖಲೆ ಮುರಿದಿದ್ದಾರೆ. ಈ ಪಟ್ಟಿಯಲ್ಲಿ ಕ್ರಿಸ್ ಗೇಲ್ ದ್ವಿತೀಯ ಸ್ಥಾನದಲ್ಲಿದ್ದರು. 141 ಐಪಿಎಲ್ ಇನಿಂಗ್ಸ್ಗಳಲ್ಲಿ ಗೇಲ್ ಒಟ್ಟು 6 ಶತಕ ಸಿಡಿಸಿದ್ದರು. ಸದ್ಯ ಬಟ್ಲರ್ 101 ಇನ್ನಿಂಗ್ಸ್ ಗಳಲ್ಲಿ 7ನೇ ಶತಕದ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. 236 ಇನಿಂಗ್ಸ್ಗಳಲ್ಲಿ ಒಟ್ಟು 8 ಶತಕಗಳನ್ನು ಸಿಡಿಸಿ, ಅಗ್ರರಾಗಿದ್ದಾರೆ.