ಬೆಂಗಳೂರು: ಇಲ್ಲಿಯ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ ವಿಚಾರಿಸಿದ್ದಾರೆ.
ನಗರದಲ್ಲಿನ ಬ್ರೂಕ್ ಫೀಲ್ಡ್ ಆಸ್ಪತ್ರೆ ಹಾಗೂ ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಸಿಎಂ ಆಗಮನದ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಮುಂದೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಗಾಯಾಳುಗಳ ಆರೋಗ್ಯದ ಕುರಿತು ವೈದ್ಯ ರವಿಬಾಬು ಮಾಹಿತಿ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಸಿಎಂ, ಎರಡು ದಿನಗಳಲ್ಲಿ ಆರೋಪಿ ಪತ್ತೆ ಹಚ್ಚಿ ಬಂಧಿಸುತ್ತೇವೆ. ಆರೋಪಿ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ತನಿಖೆಯಲ್ಲಿ ಎಲ್ಲ ಸತ್ಯಾಸತ್ಯತೆ ತಿಳಿಯಲಿದೆ ಎಂದು ಹೇಳಿದ್ದಾರೆ.
ಗಾಯಾಳುಗಳ ಆರೋಗ್ಯದ ಕುರಿತು ವೈದ್ಯರು ಮಾಹಿತಿ ನೀಡಿದ್ದಾರೆ. ಸ್ವರ್ಣಾಂಬ ಎಂಬ ಮಹಿಳೆ ಐಸಿಯುನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. ನಂತರ
ವೈದೇಹಿ ಆಸ್ಪತ್ರೆಗೆ ತೆರಳಿ ನಾಲ್ವರ ಆರೋಗ್ಯ ವಿಚಾರಿಸಿದರು.