ಬೆಂಗಳೂರು: ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಕಣ್ಣೀರು ಸುರಿಸಿರುವ ಘಟನೆ ನಡೆದಿದೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯನ್ನು ಅಪಹರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ಡಿ ರೇವಣ್ಣ (HD Revanna) ರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿ ನ್ಯಾಯಾಧೀಶರ ಎದುರು ಹಾಜರು ಪಡಿಸಿದ್ದಾರೆ. ಈ ವೇಳೆ ವಶಕ್ಕೆ ಪಡೆದು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಎಸ್ಐಟಿ ಅಧಿಕಾರಿಗಳ ಮುಂದೆ, “ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ” ಎಂದು ಕಣ್ಣೀರು ಸುರಿಸಿದ್ದಾರೆ.
ರಾಜಕೀಯ ಷಡ್ಯಂತ್ರಕ್ಕೆ ನನ್ನನ್ನು ಬಲಿ ಮಾಡಿದ್ದಾರೆ. ನಾನು ಯಾರಿಗೂ ಅನ್ಯಾಯ ಮಾಡಿದವನಲ್ಲ. ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ರಿ ಅಂತ ಎಸ್ಐಟಿ ಅಧಿಕಾರಿಗಳ ಎದುರು ಕಣ್ಣೀರಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ನೀರು ಕೊಟ್ಟು ಸಮಾಧಾನ ಮಾಡಿದ್ದಾರೆ.
ಮಹಿಳೆ ಅಪಹರಣ ಆಗಿದ್ದಾಗ ನಾನು ಬೆಂಗಳೂರಿನಲ್ಲಿದ್ದೆ. ನನ್ನ ತಂದೆ, ಹೆಚ್. ಡಿ ದೇವೇಗೌಡರನ್ನು ಮಾತನಾಡಿಸಲು ಹೋಗಿದ್ದೆ.” ಎಂದು ಅಲವತ್ತುಕೊಂಡರು.
ಈ ನಡುವೆ, ಇಂದೇ ಅಧಿಕಾರಿಗಳು ರೇವಣ್ಣ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿದರು. ನ್ಯಾಯಾಧೀಶರು ನಾಲ್ಕು ದಿನಗಳ ಕಾಲ ಎಸ್ ಐಟಿ ವಶಕ್ಕೆ ಒಪ್ಪಿಸಿ ಆದೇಶ ನೀಡಿದರು. ನ್ಯಾಯಾಧೀಶರ ಎದುರು ಕೂಡ ರೇವಣ್ಣ ಕಣ್ಣೀರು ಸುರಿಸಿದರು.