ಕೋಲ್ಕತ್ತಾ: ಬಿಜೆಪಿ ವಿಷಪೂರಿತ ಹಾವಿನಂತೆ ಅಪಾಯಕಾರಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಕೇಂದ್ರೀಯ ತನಿಖಾ ಸಂಸ್ಥೆಗಳಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಿಜೆಪಿಯ ಆಜ್ಞೆಯಂತೆ ಕೆಲಸ ಮಾಡುತ್ತಿವೆ. ಕೇಂದ್ರೀಯ ಸಂಸ್ಥೆಗಳು ಕೇಸರಿ ಶಿಬಿರಕ್ಕಾಗಿ ಕೆಲಸ ಮಾಡುತ್ತಿವೆ. ಬಿಜೆಪಿ ಎಂಸಿಸಿಯನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿ ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಕೂಚ್ ಬೆಹಾರ್ ಎಸ್ಪಿ ದೇಬಾಶಿಸ್ ಧಾರ್ ಅವರನ್ನು ಬಿರ್ಹಮ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿದೆ. 2021 ರ ವಿಧಾನಸಭಾ ಚುನಾವಣೆಯಲ್ಲಿ ಐದು ಜನರನ್ನು ಕೊಂದಿದ್ದಕ್ಕೆ ಧಾರ್ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.