ಉತ್ತರ ಕನ್ನಡ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಉತ್ತರ ಕನ್ನಡ ಹಾಗೂ ಬೀದರ್ ಜಿಲ್ಲೆಯ ಇಬ್ಬರು ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ರೇವಣಕರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಭಾಲ್ಕಿ ಕಾರಂಜಾ ವಿಭಾಗದ ಎಲೆಕ್ಟ್ರಿಕಲ್ ಎಂಜಿನಿಯರ್ ಶಿವಕುಮಾರ್ ಸ್ವಾಮಿ ಅವರಿಗೆ ಸೇರಿದ್ದ ಅಗ್ರಿಕಲ್ಚರ್ ಕಾಲೋನಿಯಲ್ಲಿನ ಮನೆ, ಕಲಬುರಗಿ ನಗರದ ಎಂ.ಬಿ. ಕಾಲೋನಿಯಲ್ಲಿನ ಮನೆಯ ಮೇಲೆ ದಾಳಿ ನಡೆದಿದೆ.