ಬೆಂಗಳೂರು: ಬೈಕ್ ಸವಾರನ ಮೇಲೆ ಕೊಂಬೆ ಮುರಿದು ಬಿದ್ದ ಪರಿಣಾಮ ಬೆನ್ನು ಮೂಳೆ ಮುರಿದಿರುವ ಘಟನೆ ನಡೆದಿದೆ.
ಹೀಗಾಗಿ ಕೊಂಬೆ ರಸ್ತೆಗೆ ಬೀಳುವಂತಿದ್ದರು ತೆರವು ಮಾಡದ ಆರೋಪದ ಹಿನ್ನೆಲೆಯಲ್ಲಿ ಖಾಸಗಿ ಶಾಲೆ ಹಾಗೂ ಬಿಬಿಎಂಪಿ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಗರಬಾವಿ ನಿವಾಸಿ ಚಂದನ್ ಬೆನ್ನು ಮೂಳೆ ಮುರಿತಕ್ಕೊಳಗಾದ ಬೈಕ್ ಸವಾರ. ರಿಚ್ಮಂಡ್ ರಸ್ತೆಯ ಫೈನಾನ್ಸ್ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದ ಚಂದನ್ ಕಚೇರಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಮರದ ಕೊಂಬೆ ಇವರ ಮೇಲೆ ಮುರಿದು ಬಿದ್ದಿದೆ. ರಭಸಕ್ಕೆ ಅವರ ಕುತ್ತಿಗೆಗೆ ಗಾಯವಾಗಿ, ಬೆನ್ನು ಮೂಳೆ ಮುರಿದಿದೆ. ಆನಂತರ ದಾರಿಹೋಕರು ಹಾಗೂ ಪೊಲೀಸರ ಸಹಾಯದಿಂದ ಚಂದನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಅಪಾಯದ ಅರಿವಿದ್ದರೂ ಮರದ ಕೊಂಬೆ ತೆರವು ಮಾಡದ ಖಾಸಗಿ ಶಾಲೆಯ ವಿರುದ್ಧ ಚಂದನ್ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.