ತುಮಕೂರು: ದೇಶದಲ್ಲಿ ಲೋಕಸಭಾ ಚುನಾವಣೆಗೆ ದಿನಗಣನೆಗೆ ಆರಂಭವಾಗಿದ್ದು, ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಈ ಮಧ್ಯೆ ತಿಪಟೂರು ತಾಲೂಕಿನ ನೊಣವಿನಕೆರೆಯ ಯಶ್ವಂತ ಗುರೂಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಈ ಬಾರಿ ಮಾಹಿಳಾ ಪ್ರಧಾನಿ ದೇಶಕ್ಕೆ ಸಿಗಲಿದ್ದಾರೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಮಹಿಳಾ ಪ್ರಧಾನಿ ಪ್ರಿಯಾಂಕಾ ಗಾಂಧಿ ಪ್ರದಾನಿಯಾಗಲಿದ್ದಾರೆ ಎಂದು ಯಶ್ವಂತ ಗುರೂಜಿ ಶಿವರಾತ್ರಿಯ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ 135 ಸೀಟು ಪಡೆಯಲಿದೆ ಎಂದು ಈ ಹಿಂದೆ ಯಶ್ವಂತ ಗುರೂಜಿ ನಿಖರ ಭವಿಷ್ಯ ನುಡಿದಿದ್ದರು. ಕೊರೊನಾ ಮಹಾಮಾರಿ ಕುರಿತು ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭವಿಷ್ಯ ನುಡಿದಿದ್ದರು. ಸದ್ಯ ರಾಜಕೀಯ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಒಬ್ಬಳು ಸ್ತ್ರೀ, ಪುರುಷನ ಎದುರು ದುರ್ಗಿಯಾಗಿ ನಿಂತು ಪುರುಷನಿಗೆ ಭಯ ಹುಟ್ಟಿಸಿ ತಾನೇ ಅಧಿಕಾರವನ್ನ ಮಾಡುವಳು. ತಾಯಿ ಮಮತೆಯಿಂದ ತನ್ನ ಅಧಿಕಾರವನ್ನು ಮಾತೃ ವಾತ್ಸಲ್ಯದಿಂದ ಪರರಿಗೆ ಬಿಟ್ಟುಕೊಡುವಳು. ಹೀಗಂತಾ ಕಾಲಜ್ಞಾನದಲ್ಲಿ ಉಲ್ಲೇಖವಾದ ಚುನಾವಣಾ ಭವಿಷ್ಯ ನುಡಿದಿದ್ದಾರೆ.
ಪ್ರಿಯಾಂಕ ಗಾಂಧಿ ಪ್ರಧಾನಿಯಾಗಿ ನಂತರ ರಾಹುಲ್ ಗಾಂಧಿಗೆ ಬಿಟ್ಟು ಕೊಡುವ ಸಾಧ್ಯತೆ ಇದೆ. ಶಿವರಾತ್ರಿಗೂ ಮುನ್ನ ಚುನಾವಣೆ ನಡೆದಿದ್ದರೆ ಮೋದಿಗೆ ಪ್ರಧಾನಿಯಾಗುವ ಯೋಗವಿತ್ತು. ಆದರೆ, ಯೋಗ ಈಗ ಇಲ್ಲ. ಅವರಿಗೆ ಅನಾರೋಗ್ಯ ಕಾಡಬಹುದು ಎಂದು ಹೇಳಿದ್ದಾರೆ.