ಡೆಲ್ಲಿ ವಿರುದ್ಧ ನಡೆದ 17ನೇ ಐಪಿಎಲ್ ನ 20ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ರೋಹಿತ್ ಶರ್ಮಾ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ರೋಹಿತ್ ಶರ್ಮಾ 27 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ಸೇರಿದಂತೆ 49 ರನ್ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಒಟ್ಟು 9 ಬೌಂಡರಿಗಳನ್ನು ರೋಹಿತ್ ಸಿಡಿಸಿದ್ದಾರೆ. ಈ ಮೂಲಕ ರೋಹಿತ್ ಟಿ20 ಕ್ರಿಕೆಟ್‌ನಲ್ಲಿ 1508 ಬೌಂಡರಿ ಪೂರೈಸಿದ್ದಾರೆ. ಈ ಮೂಲಕ ರೋಹಿತ್ ಈ ಸ್ವರೂಪದಲ್ಲಿ 1500 ಕ್ಕೂ ಹೆಚ್ಚು ಬೌಂಡರಿಗಳನ್ನು ಬಾರಿಸಿದ ದಾಖಲೆ ಹೊಂದಿರುವ ಭಾರತೀಯ ಮೊದಲ ಆಟಗಾರರಾಗಿದ್ದಾರೆ.
ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ ಇಲ್ಲಿಯವರೆಗೆ 1486 ಬೌಂಡರಿಗಳನ್ನು ಬಾರಿಸಿ ಭಾರತೀಯರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಕ್ರಿಸ್ ಗೇಲ್ 2196 ಬೌಂಡರಿ ಬಾರಿಸಿ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ನ ಮಾಜಿ ಆರಂಭಿಕ ಆಟಗಾರ ಅಲೆಕ್ಸ್ ಹೇಲ್ಸ್ ಟಿ20 ಮಾದರಿಯಲ್ಲಿ ಇದುವರೆಗೆ 1855 ಬೌಂಡರಿ ಬಾರಿಸಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 1673 ಬೌಂಡರಿ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.