ಚಿಕ್ಕಮಗಳೂರು: ಮಲೆನಾಡು,ಕರಾವಳಿ ಪ್ರದೇಶದಲ್ಲಿ ಮಂಗನ ಕಾಯಿಲೆಯ ಹಾವಳಿ ಇನ್ನೂ ಕಡಿಮೆಯಾಗಿಲ್ಲ. ಸದ್ಯ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ವೃದ್ಧೆ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನಾ (68) ಕಾಯಿಲೆಗೆ ಬಲಿಯಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರತ್ನಾ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಕ್ತ ಪರೀಕ್ಷೆಯಲ್ಲಿ ರತ್ನಾಗೆ ಮಂಗನ ಕಾಯಿಲೆ ಇರುವುದು ದೃಢವಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಮಂಗನ ಕಾಯಿಲೆ ಹೆಚ್ಚಾಗುತ್ತಿದ್ದು, ಕೊಪ್ಪ, ಎನ್‌ಆರ್ ಪುರ, ಶೃಂಗೇರಿ ತಾಲೂಕಿನಲ್ಲಿ ಮಂಗನ ಕಾಯಿಲೆ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿವೆ.