ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ. ಹೀಗಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಭಾರೀ ನಿರಾಸೆಯಾಗಿತ್ತು.
ಆದರೆ, ಜೆಡಿಎಸ್ ನಿಂದ ಮತ್ತೊಮ್ಮೆ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯುವುದು ಪಕ್ಕಾ ಆಗಿದ್ದು, ಮಾರ್ಚ್ 25ರಂದು ಅಧಿಕೃತವಾಗಿ ಘೋಷಣೆಯಾಗಲಿದೆ. ಪರೋಕ್ಷವಾಗಿ ನಿಖಿಲ್ ಸ್ಪರ್ಧೆ ಮಾಡುತ್ತಾರೆ ಎಂಬುವುದನ್ನು ಕುಮಾರಸ್ವಾಮಿ ಹೇಳಿದ್ದಾರೆ.
ಕುಮಾರಸ್ವಾಮಿ, ಜೆಡಿಎಸ್ ನಾಯರು, ಮುಖಂಡರ ಜೊತೆ ಸಭೆ ಮಾಡಿದ್ದು, ಸಭೆಯಲ್ಲಿ ಎಲ್ಲಾ ನಾಯಕರು ಕುಮಾರಸ್ವಾಮಿ ಇಲ್ಲ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಕುಮಾರಸ್ವಾಮಿ, ನಿಖಿಲ್ನನ್ನು ಒಪ್ಪಿಸಲು ಮುಂದಾಗುತ್ತೇನೆ. ನಿಮ್ಮ ಆಸೆಗೆ ನಾವು ಭಂಗ ತರಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ ಎಂದು ಹೇಳಿದ್ದಾರೆ.
ಈ ಬಾರಿ ಮಂಡ್ಯದಿಂದ ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಬೇಕು ಎಂದು ಜಿಲ್ಲೆಯ ಜೆಡಿಎಸ್ ನಾಯಕರು ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಸ್ಪರ್ಧಿಸದಿದ್ದರೆ, ಅವರ ಮಗ ನಿಖಿಲ್ ಕುಮಾರಸ್ವಾಮಿಯವರನ್ನಾದರೂ ಮಂಡ್ಯದಿಂದ ನಿಲ್ಲಿಸಬೇಕೆಂದು ಕಾರ್ಯಕರ್ತರು ಸಭೆಯಲ್ಲಿ ಒತ್ತಾಯಿಸಿದರು.