ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ತೆಲಂಗಾಣದ ಮಾಜಿ ಸಿಎಂ ಕೆಸಿಆರ್ ಪುತ್ರಿ ಕೆ.ಕವಿತಾರನ್ನು ಸಿಬಿಐ ವಶಕ್ಕೆ ಪಡೆದಿದೆ.
ಈಗಾಗಲೇ ಕೆ.ಕವಿತಾ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕವಿತಾ ಅವರ ನ್ಯಾಯಾಂಗ ಬಂಧನ ಅವಧಿ ಮುಗಿದಿದ್ದರಿಂದಾಗಿ ಅವರನ್ನು ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಆದರೆ, ಕೋರ್ಟ್ ಜಾಮೀನು ನಿರಾಕರಿಸಿ ಕಸ್ಟಡಿ ಅವಧಿಯನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಿತು. ಅಲ್ಲದೇ, ಜೈಲಿನಲ್ಲಿ ಕವಿತಾ ಅವರನ್ನು ವಿಚಾರಣೆಗೊಳಪಡಿಸಲು ಕೋರ್ಟ್ ಸಿಬಿಐಗೆ ಅನುಮತಿ ನೀಡಿತ್ತು. ಹೀಗಾಗಿ ಸಿಬಿಐ ಅವರನ್ನು ವಿಚಾರಣೆಗೊಳಪಡಿಸಿದೆ.
ಮದ್ಯದ ಪರವಾನಗಿಯಲ್ಲಿ ಹೆಚ್ಚಿನ ಪಾಲು ಪಡೆಯಲು ದೆಹಲಿಯ ಆಡಳಿತ ಪಕ್ಷ ಆಮ್ ಆದ್ಮಿ ಪಕ್ಷಕ್ಕೆ100 ಕೋಟಿ ರೂ. ಲಂಚ ನೀಡಿದ ಆರೋಪ ಹೊತ್ತಿರುವ ಕೆ ಕವಿತಾ ಸೌತ್ ಗ್ರೂಪ್‌ನ ಪ್ರಮುಖ ಸದಸ್ಯೆ ಎಂದು ಇಡಿ ತಿಲಿಸಿದೆ. ಈ ಪ್ರಕರಣದಲ್ಲಿ ಈಗಾಗಲೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದಾರೆ.